ಒಂದು ಪೀಠಿಕೆ, ಸಮಜಾಯಿಷಿ, ವರದಿ ಮತ್ತು ವಂದನಾರ್ಪಣೆ

ಪೀಠಿಕೆಗೊಂದು ಕಥೆ... ಇದು ನಿಜ್ವಾಗ್ಲೂ ನಡೆದ- ಇನ್ನೂ ಪರಿಹಾರ ಕಾಣದಿರುವ ಸಂಗತಿ. ನನ್ನ ಹಳೆ ಗೆಳತಿಯೊಬ್ಬಳ ಹೆಸರು ಭವ್ಯಾ. ಅವಳ ಗಂಡ ಚಂದನ್. ಅವರಿಬ್ರೂ ಪ್ರೀತಿಸಿ ಮದುವೆಯಾದ್ರು. ಪ್ರೀತಿ ಅಂದ್ರೆ... ಅದೆಂಥದ್ದು ಅಂತೀರಾ!? ಅಂವ ಇದ್ದಿದ್ದು ಮುಂಬಯಿಯಲ್ಲಿ. ಇವಳು- ಇಲ್ಲೇ, ಬೆಂಗ್ಳೂರಲ್ಲಿ. ದಿನಾ ಗಂಟೆಗೊಂದು ಸಾರ್ತಿ ಅಂವ ಇವಳಿಗೆ ಕಾಲ್ ಮಾಡಿ ಕಾಲು ಗಂಟೆಯಾದ್ರೂ ಮಾತಾಡ್ತಿರ್ತಿದ್ದ. ರಾಟ್ರಿಯಂತೂ ನಿದ್ದೆ ಬಿಟ್ಟು ಫೋನಲ್ಲಿ ಹರಟೆ ಕೊಚ್ತಿದರು. ಸರಿ. ಎರಡೂ ಕಡೆಯವರು ಒಪ್ಪಿ ಖುಶಿಖುಶಿಯಾಗೇ ಮದುವೆ ಮಾಡಿಕೊಟ್ಟರು. ಆದರೆ, ಮದುವೆಯಾದ... Continue Reading →

ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿ ನಾಲ್ಕು ಮಾತು

ನಮಸ್ತೇ... ನಿಮ್ಮೆಲ್ಲರಿಗೂ ಸ್ವಾತಂತ್ರ್ಯೋತ್ಸವದ ಶುಭಾಶಿಶಗಳು. ನಾನಂತೂ ಈ ತಿಂಗಳು, ಇವತ್ತು ಮಾತ್ರವಲ್ಲದೆ ನಮ್ಮ ಹಿಂದಿನವರು ಸ್ವಾತಂತ್ರ್ಯ ಪ್ರಾಪ್ತಿಗಾಗಿ ಪಟ್ಟ ಬವಣೆಗಳನ್ನ ನೆನೀತಾ ಇರ್ತೇನೆ, ಮಾತಾಡ್ತಾ ಇರ್ತೇನೆ. ಅದೆಲ್ಲ ನನಗೆ ಸಿಕ್ಕ ಸಹವಾಸದ ಫಲವೆಂದೇ ತಿಳಿಯಿರಿ. ಆದರೆ ಇದರಿಂದ ನನಗೆ ವೈಯಕ್ತಿಕವಾಗಿಯೂ ಬಹಳಷ್ಟು ಲಾಭವಾಗಿದೆ. ನಾನು ನಾಡಿನ ಸ್ವಾತಂತ್ರ್ಯದ ಬಗ್ಗೆ ಯೋಚಿಸ್ತ ಯೋಚಿಸ್ತಲೇ ವ್ಯಕ್ತಿಯೊಬ್ಬನ ವೈಯಕ್ತಿಕ ಸ್ವಾತಂತ್ರ್ಯ- ಸ್ವೇಚ್ಚೆಗಳ ಬಗ್ಗೆಯೂ ಯೋಚಿಸಲು ಪ್ರೇರೇಪಣೆ ದೊರೆತಿದ್ದು ಇದರಿಂದಲೇ. ವ್ಯಕ್ತಿಯೊಬ್ಬನ ಸ್ವೇಚ್ಛೆಯನ್ನ ಅಮೆರಿಕಕ್ಕೆ ಹೋಲಿಸಬಹುದು ಅಂತ ಆಗಾಗ ನನಗನಿಸೋದಿದೆ. ~ ಅಂದ... Continue Reading →

ಹಳೆಯ ನೆನಪು ಮತ್ತು ಒಂದು ಹೊಸ ಪುಸ್ತಕ

ಈಗ ಅದೆಲ್ಲ ಮಜಾ ಅನಿಸತ್ತೆ. ನಾನು ಒಂದನೇ ಕ್ಲಾಸಿಂದ ಫಸ್ಟ್ ಬಿಎಸ್ಸಿ ವರೆಗೂ ಒಂದೇ ಒಂದು ನೋಟ್ಸೂ ಬರೆದಿರಲಿಲ್ಲ! ( ಆಮೇಲೆ ಬರ್ದೆ ಅಂದ್ಕೊಳ್ಬೇಡಿ... ನಾನು ಓದು ನಿಲ್ಲಿಸಿದ್ದು ಆಗಲೇ. ಮದ್ವೆ ಆಯ್ತಲ್ಲ, ಅದ್ಕೆ...) ಆದ್ರೂ ನಾನು ಮೊದಲ ಮೂರು ಪ್ಲೇಸಲ್ಲಿ ಇರ್ತಿದ್ದೆ ಅನ್ನೋದು ನಾನು ಕೊಟ್ಕೊಳೋ ಸಮಜಾಯಿಶಿ! (ನೀವು ನನ್ನ ಶತದಡ್ಡಿ ಅಂದ್ಕೋಬಾರದಲ್ಲ, ಅದ್ಕೆ!!) ಹಾಗಾದ್ರೆ, ದಪ್ಪ ದಪ್ಪ ರಟ್ಟಿನ ನೂರು- ಇನ್ನೂರು ಪುಟಗಳ ‘ಲೇಖಕ್’ ನೋಟ್ ಬುಕ್ ಗಳನ್ನ ನಾನೇನು ಮಾಡ್ತಿದ್ದೆ? ಕೊನೆ ಪುಟದಿಂದ... Continue Reading →

ಭೀಮೇಶ್ವರನ ಭಂಡಾರ ಮತ್ತು “ಎಲ್ಲ ಕರಗಿ ಕರಗಿ ಕರಗಿ…”

ಉಜ್ವಲಾ, ಕಿಶೋರಿ, ಗಿರಿಧಾರಿ... ಮೂವರೂ ಒಬ್ಬರ ಹಿಂದೊಬ್ಬರು ಸೊಂಯ್ ಸೊಂಯ್ ಅಂತ ಓಡೋಡಿ ಬಂದು ನನ್ನ ಡೆಸ್ಕಿನ ಕೆಳಗೆ ಬಚ್ಚಿಟ್ಟುಕೊಳ್ಳಲು ಪೈಪೋಟಿ ಶುರುವಿಟ್ಟರು. ಯಾಕೋ ಬೆಳಗಿಂದಲೂ ‘ಇವತ್ತು ಶನಿವಾರ’ ಅನ್ನುವ ಭ್ರಮೆಯಲ್ಲಿದ್ದ ನನಗೆ ಇನ್ನೇನು ಅದು ಖಚಿತವಾಗ್ಬೇಕು, ನನ್ನ ಕಲೀಗು, ‘ಯಾಕೆ? ಸ್ಕೂಲ್ ಬಿಟ್ ಬಿಟ್ರ?’ ಕೇಳೇಬಿಟ್ಟರು. ಆ ಮಕ್ಕಳಲ್ಲಿ ಇಬ್ಬರು ‘ಎಕ್ಲಿಪ್ಸಿಗೆ ಹಾಲಿಡೇ’ ಅಂತ ನುಲಿದರೆ, ಉಜ್ವಲಾ ‘ಇವತ್ತೂ... ಅಮವಾಸ್ಯಾ’ ಅಂತ ಗಿಳಿಯ ಹಾಗೆ ಉಲಿದಳು. ~ ಅಮವಾಸ್ಯೆ? ಈ ಪುಟಾಣಿಗೆ ಗ್ರಹಣದ ಸಂಗತಿ ಗೊತ್ತಿಲ್ವೇನೋ,... Continue Reading →

ಭಾಮಿನಿ ಷಟ್ಪದಿ, ಮುನ್ನುಡಿ ಮತ್ತು ಬೆನ್ನುಡಿ…

ನಮಸ್ತೇ ‘ಭಾಮಿನಿ’ ಅಂತೂ ತಯಾರಾಗಿ ನಿಂತಿದ್ದಾಳೆ. ನೀವು ಕೇಳುತ್ತಿದ್ದ ‘ಎಲ್ಲಿ?’, ‘ಯಾವಾಗ?’ಗಳಿಗೂ ಆದಷ್ಟು ಬೇಗ ಉತ್ತರಿಸುವೆ. ಸಧ್ಯಕ್ಕೆ ಭಾಮಿನಿ ಶಟ್ಪದಿಗಾಗಿ ಜೋಗ ಬರೆದ ಮುನ್ನುಡಿ, ನಟರಾಜ್ ಹುಳಿಯಾರ್ ಬರೆದ ಬೆನ್ನುಡಿಗಳನ್ನು ಓದಿಕೊಂಡು, ನಿಮ್ಮ ನಾಲ್ಕು ನಲ್ನುಡಿಗಳನ್ನು ಹಂಚಿಕೊಳ್ಳುವಿರಾ? ನಲ್ಮೆ, ಚೇತನಾ ತೀರ್ಥಹಳ್ಳಿ

ಚೇತನಕ್ಕೆ ಒಂದು ವರ್ಷ!?

ಒಂದು ವರ್ಷ! ಅದೆನೂ ಹೆಚ್ಚಲ್ಲ ಬಿಡಿ. ಕಳೆದ ಎರಡು- ಮೂರು ವರ್ಷಗಳಿಂದ ಬ್ಲಾಗಿಂಗ್ ಮಾಡಿಕೊಂಡು ಒಮ್ಮೆಯೂ ಬೋರು ಎಂದು ಕೈ ಚೆಲ್ಲದೆ, ಮುನಿದುಕೊಳ್ಳದೆ ಕ್ರಿಯಾಶೀಲರಾಗಿರೋರು ಸಾಕಷ್ಟಿದ್ದಾರೆ. ಆದರೂ... ನನ್ನ ‘.... ಚೇತನ’ಕ್ಕೆ ಒಂದು ತುಂಬಿದ್ದೊಂದು ವಿಶೇಷ ಸಂಗತಿಯೇ! ಯಾಕೆ ಗೊತ್ತಾ? ನಾನು ಬ್ಲಾಗು ಶುರು ಮಾಡಿದ್ದು ಇವತ್ತಿಗೆ (೨೮ ಜುಲೈ) ಸರಿಯಾಗಿ ಒಂದು ವರ್ಷದ ಹಿಂದೆ. ಆದರೆ ರೆಗ್ಯುಲರ್ರಾಗಿ ಬರೀಲಿಕ್ಕೆ ಶುರು ಮಾಡಿದ್ದು ಅಕ್ಟೋಬರಿನಲ್ಲಿ. ಇನ್ನೂ ಮಜದ ವಿಷಯವೆಂದರೆ, ಮೊದಲ ಬಾರಿಗೆ ‘ಮುಚ್ಚುವೆ ಬ್ಲಾಗಿಲ’ ಅಂದಿದ್ದು ಎರಡೇ... Continue Reading →

Blog at WordPress.com.

Up ↑