ಸುಮ್ಮನೆ ಮೈ ಮೇಲೆ ಇರುವೆ ಬಿಟ್ಕೊಳ್ಳೋ ನನ್ನತನದ ವ್ಯರ್ಥ ಪ್ರಲಾಪ ಅರಿವಾದ ಹೊತ್ತಲ್ಲಿ ಒಂದರ ಹಿಂದೆ ಮತ್ತೊಂದು ನೆನಪಾದ ಕಥೆಗಳಿವು. ಅಥವಾ ಈ ಕಥೆಗಳು ನೆನಪಾದ ಬೆನ್ನಲ್ಲೇ ನನ್ನ ರೀತಿಯ ವ್ಯರ್ಥತೆ ಅರಿವಿಗೆ ಬಂತು ಅನ್ನಲೂಬಹುದು. ತಾವೋ ಹೇಳುತ್ತೆ, ಸುಮ್ಮನಿರು. ಪ್ರತಿಯೊಂದೂ ತನ್ನ ಪಾಡಿಗೆ ನಡೆಯುತ್ತೆ. ಹಾಗಂತ ನೀನು ನಿಜವಾಗ್ಲೂ ಸುಮ್ಮನಿರಬೇಕು ಮತ್ತೆ! ಕಾಲದ ಹರಿವಿಗೆ ನಿನ್ನ ಸಂಪೂರ್ಣವಾಗಿ ಕೊಟ್ಟುಕೋಬೇಕು ಮತ್ತೆ! ~ ಕಥೆ ೧ ~ ಅದೊಂದು ಬೀದಿ ನಾಯಿ. ಅದು ತನ್ನದೇ ಅಂತ ಅಂದುಕೊಂಡಿರುವ... Continue Reading →
ಮೇಣದ ಚರಟ
ಹತ್ತು, ಇಪ್ಪತ್ತು... ನಲವತ್ತು ಮುಂಬತ್ತಿಗಳು!! ಮುಗಿದ ಬದುಕಿನ ಲೆಕ್ಕ. ಬೆಳಕು ಹರಡಿದ ಸಾರ್ಥಕ ಘಳಿಗೆಗಳೂ ಇವೆಯಿದರಲ್ಲಿ. ಈಗ ಉಪಯೋಗವಿಲ್ಲದ ಮೇಣದ ಚರಟದ ಹಾಗೆ ಉಳಿದಿದೀನಾ? ಯೋಚಿಸಬೇಕಿದೆ. ಬೆಳಗಿಂದ ಒಂದೇ ಸಮ ಫೋನ್ ಕಾಲ್ ಗಳು. ಹರಕೆ ಹೊತ್ತಂತೆ ಶುಭ ಹಾರೈಕೆಯ ಶಾಸ್ತ್ರ ಮುಗಿಸ್ತಿದಾರೆ. ಗೊತ್ತಿರುವ ಗೆಳೆಯ ಗೆಳತಿಯರೆಲ್ಲರೂ ‘ಇನ್ನೇನು ಆಂಟಿಯಾದೆ’ ಅಂತ ಛೇಡಿಸುವವರೇ. ಹೀಗೆ ಎಲ್ಲರ ಹಾರೈಕೆಯೂ ಬಂದಿದೆ, ಬರುತ್ತಿದೆ. ಅವರಿಬ್ಬರದನ್ನ ಬಿಟ್ಟು. ‘ನನ್ನತನ ಮೀರಿದ ಜೀವ’ ಅಂದುಕೊಂಡ ವ್ಯಕ್ತಿಗಳು ಬಹಳಷ್ಟು ಸಾರ್ತಿ ಬದಲಾಗಿದಾರೆ. ಕೊನೆಗೂ... Continue Reading →
ಗಾಂಧಿ, ಅಪ್ಪ ಮತ್ತು ವ್ಯವಸ್ಥೆಯ ಮೇಲಿನ ದ್ವೇಷ!
“ನಾನು ಅಪ್ಪನನ್ನ ದ್ವೇಷಿಸ್ತೇನೆ. ಅದಕ್ಕೇ, ಅಂತಹ ಅಪ್ಪಂದಿರನ್ನ ಸೃಷ್ಟಿಸುವ ಈ ವ್ಯವಸ್ಥೆಯನ್ನೂ ದ್ವೇಷಿಸ್ತೇನೆ” ಅಂತ ಅಂವ ಪತ್ರ ಬರೆದಿಟ್ಟು ಹೋಗಿದ್ದ! “ಹಾಗೇನೂ ಇಲ್ಲ. ನಮ್ಮ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದು ಗಾಂಧೀಜಿ ಏನಲ್ಲ. ತುಂಡು ಲಂಗೋಟಿ ಉಟ್ಟು ಉಪವಾಸ ಕುಂತ ಮಾತ್ರಕ್ಕೆ ಬಿಳಿಯರು ಓಡಿಹೋಗಿಬಿಟ್ರು ಅನ್ನೋದು ಮೂರ್ಖತನ!” ಅಣ್ಣ ವಾದಿಸ್ತಿದ್ದ. ಅಪ್ಪನ ಮುಖ ಸುಟ್ಟ ಬದನೆಕಾಯಿ ಆಗಿತ್ತು. ಮಾತಿಗೆ ಮಾತು ಬೆಳೀತು. “ಗಾಂಧೀಜಿ ಅಹಿಂಸಾವಾದಿಯಾಗಿದ್ರು, ಸಹನಾಮೂರ್ತಿಯಾಗಿದ್ರು…” ಅಂತ ಅಂವ ಕಿರುಚಾಡಿದ. ” ಅವರು ಯಾವತ್ತೂ ಯಾರನ್ನೂ ನೋಯಿಸಿದೋರಲ್ಲ. ಬಡ್ಡೀ... Continue Reading →
ಕಥೆಯ ದಿನದಲ್ಲೊಂದು ಬೆಳಗು
ಕೌಸಲ್ಯಾ ಸುಪ್ರಜಾ ರಾಮ ಪೂರ್ವಾ ಸಂಧ್ಯಾ ಪ್ರವರ್ತತೇ... ಬಡ್ಕೊಳ್ತಲೇ ಇದೆ ಅಲರಾಮು. ಈ ಹೊಸ ಹ್ಯಾಂಡ್ ಸೆಟ್ ಕೊಂಡಾಗಿಂದ ಇದನ್ನೇ ಅಲರಾಮ್ ಟೋನ್ ಮಾಡ್ಕೊಂಡಿದಾನೆ. ಬೆಳಬೆಳಗಿನ ಸುಪ್ರಭಾತ ಕೇಳುವಾಗೆಲ್ಲ ಅವನಿಗೆ ಐದು ಗಂಟೆಗೆ ಎದ್ದು ಬಾಗಿಲಿಗೆ ನೀರು ಹಾಕ್ತಿದ್ದ ಅಮ್ಮನ ನೆನಪು. ಇತ್ತೀಚೆಗೆ ಅವನು ಅಮ್ಮನ್ನ ನೆನೆಸ್ಕೊಳ್ಳೋದು ಜಾಸ್ತಿಯಾಗಿದೆ. ಅಲಾರಮ್ಮು ಸ್ನೂಜ್ ಮಾಡಿ ಮತ್ತೈದು ನಿಮಿಷ ಹೊರಳಾಡಿದವನು ಏಳಲೇಬೇಕಾದ ಅನಿವಾರ್‍ಯತೆಗೆ ಗೊಣಗುತ್ತಲೇ ಎದ್ದು ಕುಂತ. ಚಳಿಗಾಲ ಬೇರೆ. ತಾನೆದ್ದ ಅದೆಷ್ಟೋ ಹೊತ್ತಿನ ಮೇಲೆ ಕಾಣಿಸ್ಕೊಳ್ತಾನೆ ಸೂರ್ಯ. ಸೂರ್ಯನ... Continue Reading →
ಇನ್ನಾದರೂ ವ್ಯಾಪ್ತಿ ಪ್ರದೇಶದ ಒಳಗೆ ಬಾ…
“ನೀವು ಕರೆ ಮಾಡಿದ ಚಂದಾದಾರರು ವ್ಯಾಪ್ತಿ ಪ್ರದೇಶದ ಹೊರಗಿದ್ದಾರೆ. ದಯವಿಟ್ಟು ಸ್ವಲ್ಪ ಸಮಯದ ನಂತರ ಪ್ರಯತ್ನಿಸಿ…” ಒಂದೇ ಸಮ ಬಡ್ಕೊಳ್ತಿತ್ತು ಫೋನು. ಅದು ನೀನಿಲ್ಲದ ಮೊದಲ ಭಾನುವಾರ. ಈವರೆಗೆ ನೂರಿಪ್ಪತ್ತೆಂಟು ಭಾನುವಾರಗಳನ್ನ ನಾವು ಒಟ್ಟಿಗೆ ಕಳೆದಿದ್ದೆವು, ಒಮ್ಮೆಯೂ ತಪ್ಪದ ಹಾಗೆ. ನಾನು ಆರು ದಿನವೂ ಬರವಣಿಗೆಯ ಬದುಕಲ್ಲಿ ಹೈರಾಣಾಗಿರುತ್ತಿದ್ದೆ. ನೀನು ಮೀಸೆ ಬೆಳೆದ ಮಕ್ಕಳೆದುರು, ಪುಸ್ತಕದಲ್ಲಿರದ ಚರಿತ್ರೆಯ ಪಾಠವನ್ನೆಲ್ಲ ಹೇಳೋದ್ರಲ್ಲಿ ಸುಸ್ತು ಹೊಡೆದಿರುತ್ತಿದ್ದೆ. ಹೌದಲ್ಲಾ!? ಪಾಠ ಮಾಡಯ್ಯಾ ಅಂದ್ರೆ ನೀನು ಪಾಠದಲ್ಲಿರದ್ದನ್ನೆಲ್ಲ ಹೇಳ್ತಾ ಮೈಮರೆತುಬಿಡ್ತಿದ್ದೆ. ಕ್ಯಾಂಪಸ್ಸಿನ ತುಂಬೆಲ್ಲ... Continue Reading →
ಇದನ್ನ ಹೇಳಬಹುದಿತ್ತಾದರೂ ಹೇಗೆ!?
ಡಾರ್ಕ್ ರೂಮ್ ಇದರ ತುಂಬ ಬರೀ ಮಡಚಿಟ್ಟ ಪುಟಗಳೇ. ಈ ರೂಮಿಗೆ ಬೀಗ ಹಾಕಿ, ನಾನೇ ಕೀಲಿ ಕಳೆದು ಹಾಕಿದ್ದೇನೆ. ಹೀಗೆ ಕತ್ತಲಲ್ಲಿ ಕೂಡಿಟ್ಟರೂ ಈ ಕತೆಗಳು ನೂರಾಗಿ, ಸಾವಿರವಾಗಿ, ಕೊಳೆತ ತರಕಾರಿಯ ಮೇಲೆ ಗಿಜಿಗುಟ್ಟುವ ಹುಳಗಳಂತೆ ತೆವಳುತ್ತ ತೆವಳುತ್ತ ಎಲ್ಲೆಲ್ಲೂ ಹರಿದಾಡಿ, ಗೋಡೆಯೊಳ ತೂರಿ, ಇತ್ತಲಿಂದ ಹೊರಬರುತ್ತಿವೆ, ನನ್ನ ಹುರಿದು ಮುಕ್ಕುತ್ತಿವೆ. ...... (ಒಂದು ಹಳೆಯ ಬರಹ) ಎಲ್ಲರೂ ಕೇಳ್ತಾರೆ. ಮೂವತ್ತು ದಾಟಿದ್ರೂ ಮದುವೆಯತ್ತ ಮನಸ್ಯಾಕೆ ಮಾಡಿಲ್ಲ ಅಂತ. ಈಗಿನ ಕಾಲದಲ್ಲಿ ಮದುವೆಗೆ ಇಂತಿಷ್ಟೇ ವಯಸ್ಸಾಗಿರಬೇಕು... Continue Reading →
ಬಸ್ಸಿನ ಹೆಂಗಸು ಮತ್ತು ಬಿಳಿಬಿಳೀ ಸೀರೆಯ ಹುಡುಗಿಯರು…
ಬೆಂಗಳೂರಿಂದ ಹೊರಟು ಹೊಸಕೋಟೆ ಸ್ಟಾಪಲ್ಲಿಳಿದಾಗ ನೀಲಿ ಕಲರಿನ ಸ್ವಾಗತ್ ಬಸ್ಸು ರೊಂಯ್... ರೊಂಯ್ಯ್ಯ್ಯ್ ಅಂತ ಸದ್ದು ಮಾಡುತ್ತ, ಇನ್ನೇನು ನೀ ಬರುವುದರಳೊಗೆ ಹೊರಟೇಬಿಟ್ಟೆ ಅಂತ ಹೆದರಿಸ್ತ ನಿಂತಿತ್ತು. ಟಾಕೀಸಿನೆದುರು ದೊಂಬರಾಟದ ಮಜ ತೊಗೊಳ್ತ ಹೆಜ್ಜೆಯೆಣಿಸ್ತಿದ್ದವಳಿಗೆ ಅದು ಕಂಡು ಎದ್ದೆನೋ ಬಿದ್ದೆನೋ ಅಂತ ದಾಪುಗಾಲುಹಾಕಿ ನಡೆದೆ, ಮತ್ತೆ ನೂರಾ ಅರವತ್ತೇಳನೇ ಸಾರ್ತಿ ಮೋಸ ಹೋಗಿದ್ದೆ! ಮತ್ತಿನ್ನೇನು!? ಹಾಗೆ ಹೊಸಕೋಟೆಯಿಂದ ಹೊರಡುವ ಪ್ರತಿ ಬಸ್ಸೂ ಸ್ಟಾರ್ಟ್ ಮಾಡಿಕೊಂಡಾದಮೇಲೂ ಅರ್ಧ ಗಂಟೆ ಕಾದು ತನ್ನ ಟಾಪು ಭರ್ತಿಯಾಗುವ ತನಕವೂ ನಿಂತಿರುತ್ತದೆ ಅನ್ನೋದು... Continue Reading →
