ಅರೆರೆ!! ಕಣ್ಣೆದುರೇ ತಪ್ಪಿಸ್ಕೊಳ್ತಿದಾನೆ ಕಳ್ಳ... ಹಿಡಿಯಲಿಕ್ಕಾಗೋಲ್ಲ:( ಈ ವರೆಗೆ ಅವನನ್ನ ಹಿಡಿದವರು, ತಡೆದವರು ಯಾರಾದರೂ ಇದ್ದಾರಾ? ನಮ್ಮ ದಿನದಿನದ ಆಯಸ್ಸನ್ನ ಕದ್ದು ಓಡುತ್ತಲೇ ಇರುವ ಇವನ ಬೆನ್ನು ಹತ್ತಿ ಗೆದ್ದವರು ಯಾರು? ಆಫೀಸಲ್ಲಿ ಹೊಸ ಡೈರಿ ಕೊಟ್ಟರು. ವರ್ಷ ಮುಗಿಯುತ್ತಿದೆ ಅಂದರು. ಮೊಬೈಲಿನ ತುಂಬ ಅಡ್ವಾನ್ಸ್ ಮೆಸೇಜುಗಳು... ೨೦೦೮ಕ್ಕೆ ಟಾಟಾ, ೨೦೦೯ಕ್ಕೆ ವೆಲ್ ಕಮ್! ಮೊನ್ನೆ ಮೊನ್ನೆ ಹೊಸ ವರ್ಷದ ಶುಭಾಶಯ ಹೇಳಿದ್ದ ನೆನಪು. ಏನೆಲ್ಲ ಆಗಿಹೋಯ್ತು ಈ ವರ್ಷದಲ್ಲಿ? ನಾನು ಹೆಚ್ಚು ಕಾಯಿಲೆ ಬೀಳಲಿಲ್ಲ (ಅಮ್ಮನ... Continue Reading →
ಮತ್ತೊಂದು ಸಿನೆಮಾ ಮತ್ತು ನನ್ನ ತಲೆಬಿಸಿ…
ಒಟ್ಟಾರೆ ಬಂಗಾಳದ ಪ್ರವಾಸ ಒಂದೆರಡು ಡಾಕ್ಯುಮೆಂಟರಿಗಳನ್ನೂ, ಮೂರ್ನಾಲ್ಕು ಪ್ರಶಸ್ತಿ ವಿಜೇತ ಸಿನೆಮಾಗಳನ್ನೂ ನೋಡಿದ ಅನುಭವ ಮೂಡಿಸಿತ್ತು. ಹೀಗಿರುವಾಗ ಮೊನ್ನೆ ಭಾನುವಾರ ‘ಹಾಗೆ ಸುಮ್ಮನೇ ಒಂದು ಮಸಾಲಾ ಸಿನೆಮಾ ನೋಡುವ’ ಅಂದುಕೊಂಡವಳಿಗೆ ತೋಚಿದ್ದು, ‘ರಬ್ ನೆ ಬನಾದಿ ಜೋಡಿ’. ಪಕ್ಕಾ ಮಿಡಲ್ ಕ್ಲಾಸ್ ಪೋಸಿನ ಶಾರುಖ್ ಒಂದೇ ನೋಟಕ್ಕೆ ಸೆಳೆದುಬಿಟ್ಟ. ಅವನ ನಟನೆಯನ್ನ ಕಣ್ತುಂಬಿಸಿಕೊಳ್ಳುವ ಸಡಗರದಲ್ಲಿ ಹೀರೋಯಿನ್ನಿನ ಹೆಸರೂ ಯಾಕೋ ಗಮನಿಸಲಾರದೆ ಹೋದೆ ನಾನು. ಮುದ್ದಾಗಿದ್ದಳು ಹುಡುಗಿ. ಆದರೂ.... ಸಿನೆಮಾ ನೋಡಿದೆನಾ... ಯಾಕಾದರೂ ನೋಡಿದೆನೋ? ಒಳ್ಳೆ ‘ಭಾಮಿನಿ ಷಟ್ಪದಿ’... Continue Reading →
ಬದಲಾದ ನನ್ನೂರು… ಬಯಲಾದ ನಾನು.
ಊರಿಗೆ ಹೋಗ್ಬೇಕು... ಹಾಗಂದಕೂಡಲೆ, ಸಂಭ್ರಮ ಮತ್ತು ವಿಷಾದಗಳೆರಡೂ ನನ್ನ ಆವರಿಸ್ಕೊಂಡು ಬಿಡುತ್ತೆ. ಎಷ್ಟೋ ಬಾರಿ ಊರಿಗೆ ಹೋಗಬೇಕಾದಾಗಲೆಲ್ಲ ಏನಾದರೊಂದು ನೆವ ತೆಗೆದು ಅದನ್ನ ತಪ್ಪಿಸಿಕೊಂಡು ಕುಂತಿದ್ದೂ ಇದೆ. ಇದೆಂಥ ಪಲಾಯನವೋ.. ಗೊತ್ತಾಗದೆ ಸುಮ್ಮನುಳಿದಿದ್ದೇನೆ. ನಾನ್ಯಾಕೆ ಚೇತನಾ ಹೆಸರಿನ ಜೊತೆ ತೀರ್ಥಹಳ್ಳಿಯನ್ನ ಅಂಟಿಸ್ಕೊಂಡೆ? ಚೇತನಾ ಬೆಂಗಳೂರು ಅನ್ನುವ ಹೆಸರು ಅಷ್ಟೇನೂ ಆಕರ್ಷಕವಾಗಿ ಕಾಣುವುದಿಲ್ಲವೆಂದೇ? ತೀರ್ಥಹಳ್ಳಿಯೆಂಬ ಹೆಸರಿಂದಲಾದರೂ ಒಂದಷ್ಟು ಜನ ನನ್ನ ಗಮನಿಸಲೆಂದೇ? ಅಥವಾ, ಹಳೆಯ ಐಡೆಂಟಿಟಿ ಕಳಚಲೆಂದು ಅಂದುಕೊಂಡರೂ, ನಾನು ಪೂರ್ತಿ ಕಳೆದುಹೋಗಿಬಿಡಬಾರದೆಂಬ ಎಚ್ಚರಿಕೆಯಿಂದಲೇ? ಇವನ್ನೆಲ್ಲ ಯೋಚಿಸುತ್ತ ಇದ್ದರೆ... Continue Reading →
ಪುಸ್ತಕ ಸಂತೆಯಲ್ಲಿ ಸಿಕ್ಕ ನೀಲಾ ಮೇಡಮ್
ಅದು ನೀಲಾ ಮೇಡಮ್ ಕಥೆ. ಅದೇ, ಅಮ್ಮ ಇಲ್ಲದ ಹುಡುಗಿ... ಮದುವೆಯಾದ ಹೊಸತರಲ್ಲೆ ಗಂಡನ್ನ ಕಳಕೊಂಡು ಅಪ್ಪನ ಮನೆ ಸೇರಿದ ಹುಡುಗಿ... ಚೆನ್ನಾಗಿ ಓದು ಬರಹ ಕಲಿತು, ನೀಲಾಳಿಂದ ನೀಲಾ ಮೇಡಮ್ ಆದ ಹುಡುಗಿ. ಅಪ್ಪನೂ ಇಲ್ಲವಾಗಿ, ಮತ್ತೆ ಒಬ್ಬಂಟಿಯಾದ ಹುಡುಗಿ. ತಮ್ಮನ್ನ ಓದಿಸಲಿಕ್ಕೆ ಕವಡೆಕಟ್ಟಿಕೊಂಡು ದುಡಿದ ಹುಡುಗಿ. ಟೀಚರ್ ಆಗಿದ್ದಾಗಲೇ ನಾಟಕದ ಪಾತ್ರವಾಗಿದ್ದ ಅರ್ಜುನನ್ನ ಮೋಹಿಸಿ, ಊರು ಬಿಟ್ಟು, ಕೇರಿ ಬಿಟ್ಟು, ಜಾತಿ ಬಿಟ್ಟು, ತಮ್ಮನ್ನೂ ಬಿಟ್ಟು ಮದುವೆಯಾದ ಹುಡುಗಿ. ಅರ್ಜುನ ಕುಡಿದು ಅವಾಂತರ ಮಾಡಿದ... Continue Reading →
ನಿನ್ನ ಗಂಡೆದೆ ಹೀಗೆ…
ನಿನ್ನೆದೆಯಲ್ಲಿ ಮುಖವಿಟ್ಟಾಗ ಒಳಗೆಲ್ಲ ಏನೊ ಅರಳಿದ ಸದ್ದು. ನಿದ್ದೆಯ ಮಗು ನಕ್ಕ ಹಾಗೆ, ಹಾಗೇ ಸಣ್ಣ ನಿರುಮ್ಮಳ. ಕೂದಲ ನಡುವೆ ಬೆರಳು ತೂರಿ ನೀ ತಲೆಯನುಜ್ಜುವಾಗ ಸಾವಿರ ದಳದ ಮೊಗ್ಗು ಬಿರಿದು, ಸಹಸ್ರಾರ ಚಟಪಟ. ಜಗದ ಬೆರಗು ಹರಿಯುವಂತೆ ತುಳುಕುತ್ತ ನಗುವ ನಿನ್ನ ಗಂಡೆದೆ ಹೀಗೆ, ಅಮ್ಮನ ತೊಡೆಯ ಹಾಗೆ…
ವ್ಯವಸ್ಥೆಯ ತಲೆ ಕಡಿದರೆ ಆದರ್ಶ ಚಿಗುರುವುದಂತೆ!
"ಹಂಗಂದ್ರೆ ಹೆಂಗೇ ಅಮ್ಮಿ? ಸುಖಾಸುಮ್ನೆ ಯಾರೋ ಅಡ್ನಾಡಿಗಳು ಕೇಳಿದ್ರು ಅಂತ ಹಂಗೆಲ್ಲ ಮನೆ- ಜಮೀನು ಕೊಟ್ಬಿಡಕ್ಕಾಗ್ತದಾ? ಅದ್ಕೇಯ, ನಾ ನಿಮ್ಮಪ್ಪನ್ ಹತ್ರ ಬಡ್ಕಂಡಿದ್ದು. ಓದ್ಸೋ ಉಸಾಬ್ರಿ ಬೇಕಾಗಿಲ್ಲ, ಸುಮ್ನೆ ನಮ್ಮಣ್ಣನ ಮಗನ ಕೈಲಿ ತಾಳಿ ಕಟ್ಟಿಸ್ಬಿಡಿ ಅಂತ" ಅಮ್ಮ ವಟಗುಡ್ತಿದ್ದಳು. ಹಾಗೆ ಅವಳು ನನ್ನ ಮೇಲೆ ಹರಿಹಾಯೋದಕ್ಕೆ ಕಾರಣವೂ ಇತ್ತು... ಅದೇ ತಾನೆ ನಾನು ಕಾಲೇಜಿಂದ ಮನೇಗೆ ಹೊರಟಿದ್ದೆ. ಈಗ ಇಲ್ಲವಾಗಿರೋ ಆ ಇಬ್ಬರು ಹೆಣ್ಮಕ್ಕಳು ನನ್ನ ದಿಕ್ಕು ತಪ್ಪಿಸಿದ್ದರು. ತಿಳಿಯಾಗಿದ್ದ ನನ್ನ ಮನಸಿಗೆ ಆದರ್ಶಗಳ ಕಲ್ಲೆಸೆದು... Continue Reading →
ಚೇತನಾ…. ಅನಿಕೇತನ!
ಅದ್ಯಾವ ಘಳಿಗೇಲಿ ಬ್ಲಾಗೋದುಗ ಮಹಾಶಯರೊಬ್ಬರು ‘ಆಗು ನೀ ಅನಿಕೇತನ’ ಅಂತ ಹಾರೈಸಿದ್ರೋ, ಕಾಕತಾಳೀಯವೆನ್ನುವ ಹಾಗೆ ಮೇಲಿನ ಮನೆ ಆಂಟಿ ಕೂಡ ಬೆಳಗಾಗೆದ್ದು “ಪೂಜೀಸಾಲೆನ್ನಿಂದ ವರವೇ ಶ್ರೀ ಗವ್ರೀ ನಿನ್ನಯ ಚರಣಗಳಾ... ಓ ನನ್ನ ಚೇತನಾ, ಆಗು ನೀ ಅನಿಕೇತನಾ... ಹೂವ್ವೂ... ಚೆಲುವೆಲ್ಲಾ ನಂದೆಂದಿತೂ..." ಅಂತ ರಿಮಿಕ್ಸ್ ಹಾಡಲು ಶುರುವಿಟ್ಟರು. ದಿನಾಬೆಳಗೂ ಅವರ ಆರ್ಕೆಸ್ಟ್ರ್‍ಆ ಕೇಳೀ ಕೇಳೀ, ಅದಿಲ್ಲದೆ ಊಟ ನಿದ್ದೆ ಸೇರದೆ ಪುಷ್ಪಕವಿಮಾನದ ಕಮಲ್ ಹಾಸನ್ ಸ್ಥಿತಿ ತಲುಪಿದ್ದ ನನಗೆ ಈ ... ಅನಿಕೇತನ... ಎಲ್ಲಿಂದ ಬಂದು... Continue Reading →
