ಕಥೆಯ ದಿನದಲ್ಲೊಂದು ಬೆಳಗು

ಕೌಸಲ್ಯಾ ಸುಪ್ರಜಾ ರಾಮ ಪೂರ್ವಾ ಸಂಧ್ಯಾ ಪ್ರವರ್ತತೇ... ಬಡ್ಕೊಳ್ತಲೇ ಇದೆ ಅಲರಾಮು. ಈ ಹೊಸ ಹ್ಯಾಂಡ್ ಸೆಟ್ ಕೊಂಡಾಗಿಂದ ಇದನ್ನೇ ಅಲರಾಮ್ ಟೋನ್ ಮಾಡ್ಕೊಂಡಿದಾನೆ. ಬೆಳಬೆಳಗಿನ ಸುಪ್ರಭಾತ ಕೇಳುವಾಗೆಲ್ಲ ಅವನಿಗೆ ಐದು ಗಂಟೆಗೆ ಎದ್ದು ಬಾಗಿಲಿಗೆ ನೀರು ಹಾಕ್ತಿದ್ದ ಅಮ್ಮನ ನೆನಪು. ಇತ್ತೀಚೆಗೆ ಅವನು ಅಮ್ಮನ್ನ ನೆನೆಸ್ಕೊಳ್ಳೋದು ಜಾಸ್ತಿಯಾಗಿದೆ. ಅಲಾರಮ್ಮು ಸ್ನೂಜ್ ಮಾಡಿ ಮತ್ತೈದು ನಿಮಿಷ ಹೊರಳಾಡಿದವನು ಏಳಲೇಬೇಕಾದ ಅನಿವಾರ್‍ಯತೆಗೆ ಗೊಣಗುತ್ತಲೇ ಎದ್ದು ಕುಂತ. ಚಳಿಗಾಲ ಬೇರೆ. ತಾನೆದ್ದ ಅದೆಷ್ಟೋ ಹೊತ್ತಿನ ಮೇಲೆ ಕಾಣಿಸ್ಕೊಳ್ತಾನೆ ಸೂರ್ಯ. ಸೂರ್ಯನ... Continue Reading →

ಇನ್ನಾದರೂ ವ್ಯಾಪ್ತಿ ಪ್ರದೇಶದ ಒಳಗೆ ಬಾ…

“ನೀವು ಕರೆ ಮಾಡಿದ ಚಂದಾದಾರರು ವ್ಯಾಪ್ತಿ ಪ್ರದೇಶದ ಹೊರಗಿದ್ದಾರೆ. ದಯವಿಟ್ಟು ಸ್ವಲ್ಪ ಸಮಯದ ನಂತರ ಪ್ರಯತ್ನಿಸಿ…” ಒಂದೇ ಸಮ ಬಡ್ಕೊಳ್ತಿತ್ತು ಫೋನು. ಅದು ನೀನಿಲ್ಲದ ಮೊದಲ ಭಾನುವಾರ. ಈವರೆಗೆ ನೂರಿಪ್ಪತ್ತೆಂಟು ಭಾನುವಾರಗಳನ್ನ ನಾವು ಒಟ್ಟಿಗೆ ಕಳೆದಿದ್ದೆವು, ಒಮ್ಮೆಯೂ ತಪ್ಪದ ಹಾಗೆ. ನಾನು ಆರು ದಿನವೂ ಬರವಣಿಗೆಯ ಬದುಕಲ್ಲಿ ಹೈರಾಣಾಗಿರುತ್ತಿದ್ದೆ. ನೀನು ಮೀಸೆ ಬೆಳೆದ ಮಕ್ಕಳೆದುರು, ಪುಸ್ತಕದಲ್ಲಿರದ ಚರಿತ್ರೆಯ ಪಾಠವನ್ನೆಲ್ಲ ಹೇಳೋದ್ರಲ್ಲಿ ಸುಸ್ತು ಹೊಡೆದಿರುತ್ತಿದ್ದೆ. ಹೌದಲ್ಲಾ!? ಪಾಠ ಮಾಡಯ್ಯಾ ಅಂದ್ರೆ ನೀನು ಪಾಠದಲ್ಲಿರದ್ದನ್ನೆಲ್ಲ ಹೇಳ್ತಾ ಮೈಮರೆತುಬಿಡ್ತಿದ್ದೆ.  ಕ್ಯಾಂಪಸ್ಸಿನ ತುಂಬೆಲ್ಲ... Continue Reading →

Create a free website or blog at WordPress.com.

Up ↑