ಬೆಂಗಳೂರಿಂದ ಹೊರಟು ಹೊಸಕೋಟೆ ಸ್ಟಾಪಲ್ಲಿಳಿದಾಗ ನೀಲಿ ಕಲರಿನ ಸ್ವಾಗತ್ ಬಸ್ಸು ರೊಂಯ್... ರೊಂಯ್ಯ್ಯ್ಯ್ ಅಂತ ಸದ್ದು ಮಾಡುತ್ತ, ಇನ್ನೇನು ನೀ ಬರುವುದರಳೊಗೆ ಹೊರಟೇಬಿಟ್ಟೆ ಅಂತ ಹೆದರಿಸ್ತ ನಿಂತಿತ್ತು. ಟಾಕೀಸಿನೆದುರು ದೊಂಬರಾಟದ ಮಜ ತೊಗೊಳ್ತ ಹೆಜ್ಜೆಯೆಣಿಸ್ತಿದ್ದವಳಿಗೆ ಅದು ಕಂಡು ಎದ್ದೆನೋ ಬಿದ್ದೆನೋ ಅಂತ ದಾಪುಗಾಲುಹಾಕಿ ನಡೆದೆ, ಮತ್ತೆ ನೂರಾ ಅರವತ್ತೇಳನೇ ಸಾರ್ತಿ ಮೋಸ ಹೋಗಿದ್ದೆ! ಮತ್ತಿನ್ನೇನು!? ಹಾಗೆ ಹೊಸಕೋಟೆಯಿಂದ ಹೊರಡುವ ಪ್ರತಿ ಬಸ್ಸೂ ಸ್ಟಾರ್ಟ್ ಮಾಡಿಕೊಂಡಾದಮೇಲೂ ಅರ್ಧ ಗಂಟೆ ಕಾದು ತನ್ನ ಟಾಪು ಭರ್ತಿಯಾಗುವ ತನಕವೂ ನಿಂತಿರುತ್ತದೆ ಅನ್ನೋದು... Continue Reading →
