‘ಜಂಭಗಾತಿ ಹುಡುಗಿ’ಯನ್ನ ಎದುರಿಟ್ಟುಕೊಂಡು ಮಾತನಾಡುತ್ತಿದ್ದಾಗ, ``ಹುಟ್ಟಿದಾಗಿನಿಂದಲೆ ಅವಳ ಆತ್ಮವಿಶ್ವಾಸವನ್ನು ಕೊಲ್ಲುವ ಎಲ್ಲ ಪ್ರಯತ್ನಗಳನ್ನು ಸಮಾಜ ಅದರಲ್ಲೂ ಹೆಚ್ಚಾಗಿ ಹಿರಿಯ ಹೆಂಗಸರೇ ಮಾಡುತ್ತಾರೆ" . ಇದಕ್ಕೆ ಕಾರಣವೇನಿರಬಹುದು? ಎಂದು ಸುಮಾ ಕೇಳಿಕೊಂಡ ಪ್ರಶ್ನೆಗೆ ‘ವಿ’ ಕೂಡಾ ದನಿ ಸೇರಿಸಿದ್ದಾರೆ. ಈ ಪ್ರಶ್ನೆಗೆ ಮೊದಲಿಂದಲೂ ನನಗೆ ತೋಚಿದ್ದ ಸರಳ ಉತ್ತರವನ್ನ ಈ ಕೆಳಗೆ ಹೇಳಿದೇನೆ. ಆದರೆ, ಹೆಣ್ಣು ಕೂಡ ಗಂಡಿನಂತೆ ಮಾನವ ಕುಲಕ್ಕೆ ಸೇರಿದ ಜೀವಿಯಾದ್ರಿಂದ, ಆಕೆಗೂ ಮಾನವ ಸಹಜವಾದ ಸ್ಪರ್ಧಾ ಮನೋಭಾವ, ಅರಿಷಡ್ವರ್ಗಾದಿ ಮನಸ್ಥಿತಿಗಳು ಇರುತ್ತವೆ ಅನ್ನುವುದನ್ನು ನಾವು ನೆನಪಿಟ್ಟುಕೊಳ್ಳಬೇಕು.... Continue Reading →
